ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರ: ಹೆಚ್ಚುವರಿ 40 ಕೋಟಿ ರೂ. ಅನುದಾನ ಬಿಡುಗಡೆ

Update: 2020-06-10 14:19 GMT

ಬೆಂಗಳೂರು, ಜೂ.10: ಕೊರೋನ ಸೋಂಕು ತಡೆಗಟ್ಟಲು ಹೇರಿದ್ದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ ಪರಿಹಾರ ಧನ ನೀಡುವ ಯೋಜನೆಗೆ ರಾಜ್ಯ ಸರಕಾರ ಹೆಚ್ಚುವರಿಯಾಗಿ 40 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಮೇಲ್ಕಂಡ ಉದ್ದೇಶಕ್ಕಾಗಿ ಲೆಕ್ಕ ಶೀರ್ಷಿಕೆಯಡಿ 30.34 ಕೋಟಿ ರೂ., ಪರಿಶಿಷ್ಟ ಜಾತಿ ಉಪ ಯೋಜನೆ(ಎಸ್ಸಿಪಿ) 6.78 ಕೋಟಿ ರೂ. ಮತ್ತು ಗಿರಿಜನ ಉಪ ಯೋಜನೆಯಿಂದ 2.88 ಕೋಟಿ ರೂ.ಗಳು ಸೇರಿದಂತೆ ಒಟ್ಟು 40 ಕೋಟಿ ರೂ.ಗಳನ್ನು ಇದಕ್ಕಾಗಿ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.

ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಅವಧಿಗೆ ಪರಿಹಾರವಾಗಿ ತಲಾ 5 ಸಾವಿರ ರೂ.ಗಳನ್ನು ನೀಡಲಾಗುವುದು. ಒಂದು ವೇಳೆ ಹೆಚ್ಚುವರಿ ಅನುದಾನದ ಅಗತ್ಯವಿದ್ದಲ್ಲಿ ಸಾಧ್ವಿಲ್ವಾರು ನಿಧಿಯಿಂದ ಅಥವಾ ಪೂರಕ ಅಂದಾಜು-1ರಲ್ಲಿ ಒದಗಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News