ಶಾಲೆಗಳಲ್ಲಿ ಮಾಸ್ಕ್, ಸ್ಯಾನಿಟೈಸರ್ ಮಾರಾಟ ಮಾಡಿದರೆ ಕ್ರಮ: ಶಿಕ್ಷಣ ಇಲಾಖೆ ಎಚ್ಚರಿಕೆ

Update: 2020-06-10 14:54 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.10: ಶಾಲೆಗಳಲ್ಲಿ ಕೋವಿಡ್-19ಕ್ಕೆ ಸಂಬಂಧಿಸಿದಂತೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಇತರೆ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ಹಾಗೂ ನಿರ್ದಿಷ್ಟ ಮಾರಾಟಗಾರರಿಂದ ಖರೀದಿ ಮಾಡುವಂತೆ ಒತ್ತಾಯಿಸುವಂತಿಲ್ಲವೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.

ಖಾಸಗಿ ಶಾಲೆಗಳ ಆಡಳಿತ ಮಂಡಳಿಯು ತನ್ನ ಶಾಲೆಯಲ್ಲಿ ಮಾಸ್ಕ್, ಸ್ಯಾನಿಟೈಸರ್ ಮಾರಾಟ ಮಾಡಿದಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ತಿಳಿಸಿರುವಂತೆ ಇಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆ. ಆದರೆ, ಶಾಲೆಯ ಆಡಳಿತ ಮಂಡಳಿಗಳು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡಬಹುದಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಉಪನಿರ್ದೇಶಕರು ಈ ಬಗ್ಗೆ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಹಾಗೂ ಪೋಷಕರಿಂದ ದೂರುಗಳು ಬಂದರೆ ತಕ್ಷಣವೇ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News