×
Ad

ಚಲನಚಿತ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2020-06-10 22:15 IST

ಬೆಂಗಳೂರು, ಜೂ.10: 2019ನೇ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಾಗಿ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅಂತಿಮಗೊಂಡಿದ್ದು ಅರ್ಜಿ ಸಲ್ಲಿಸಲಾಗದ ಚಿತ್ರ ನಿರ್ಮಾಪಕರು ಜೂ.20ರೊಳಗೆ ಉಪನಿರ್ದೇಶಕರು, ಚಲನಚಿತ್ರ ಶಾಖೆ ಇವರಿಗೆ ಅರ್ಜಿ ಸಲ್ಲಿಸಬಹುದು. ನಿಗದಿತ ದಿನಾಂಕದೊಳಗೆ 179 ಚಿತ್ರ ನಿರ್ಮಾಪಕರು ಅರ್ಜಿ ಸಲ್ಲಿಸಿದ್ದು ಪಟ್ಟಿಯಲ್ಲಿ ಬಿಟ್ಟು ಹೋಗಿರುವ ನಿರ್ಮಾಪಕರು ಅರ್ಜಿ ಸಲ್ಲಿಸಬಹುದು.

ಇದೇ ವೇಳೆ ಚಿತ್ರಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು. ನಿಗದಿತ ಅವಧಿಯ ನಂತರ ನೀಡುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಜಾಲತಾಣ dipr.karnataka.gov.in ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News