×
Ad

ಸಬ್ಸಿಡಿ ಸಾಲ ವಿತರಣೆ : ಮಾಹಿತಿ ಕಾರ್ಯಾಗಾರ

Update: 2020-06-10 22:19 IST

ಉಡುಪಿ, ಜೂ.10: ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಪಂ ಸಭಾಂಗಣದಲ್ಲಿ ಸರಕಾರದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ನೀಡಲಾಗುವ ಸಬ್ಸಿಡಿ ಸಾಲ ವಿತರಣೆ ಹಾಗೂ ಇತರೆ ಸಾಲಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ಬುಧವಾರ ನಡೆಯಿತು.

ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಕೌಡೂರು ಹಾಗೂ ಜಿಪಂ ಸದಸ್ಯರು ಉಪಸ್ಥಿತರಿದ್ದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ರುದ್ರೇಶ್ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News