ಬಳ್ಳಾರಿ: ಜಿಂದಾಲ್‍ ನಲ್ಲಿ ಮತ್ತಿಬ್ಬರಿಗೆ ಕೊರೋನ ಪಾಸಿಟಿವ್

Update: 2020-06-10 17:45 GMT

ಬಳ್ಳಾರಿ ಜೂ.10: ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ಉಕ್ಕು ಕಾರ್ಖಾನೆಯ ಮತ್ತಿಬ್ಬರು ಕಾರ್ಮಿಕರಿಗೆ ಕೊರೋನ ಸೋಂಕು ಇರುವುದು ದೃಡಪಟ್ಟಿದೆ. ಅವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರಿಬ್ಬರೂ ಬಳ್ಳಾರಿ ನಗರಕ್ಕೆ ಸೇರಿದವರಾಗಿದ್ದಾರೆ. ಜಿಲ್ಲೆಯ ಮೂರು ಜನರಲ್ಲಿ ನಿನ್ನೆ ಕಾಣಿಸಿಕೊಂಡ ಕೊರೋನ ಸೋಂಕಿನಿಂದ ಈವರೆಗೆ ಜಿಲ್ಲೆಯಲ್ಲಿ ಸೋಂಕು ದೃಢಪಟ್ಟವರ ಸಂಖ್ಯೆ 71ಕ್ಕೇರಿದೆ. ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನ ಕೋಗಳಿ ಗ್ರಾಮದ 60 ವರ್ಷದ ಮಹಿಳೆಗೆ ಸೋಂಕು ಕಾಣಿಸಿಕೊಂಡಿದೆ. ಈ ಮಹಿಳೆ ಇತರೆ ಕಾಯಿಲೆಗಳಿಂದಲೂ ಬಳಲುತ್ತಿದ್ದಾರೆ.

ಉಳಿದಂತೆ ಜಿಂದಾಲ್‍ನಲ್ಲಿ ಈ ಮೊದಲು ಸೋಂಕು ಕಾಣಿಸಿಕೊಂಡಿದ್ದ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಬಳ್ಳಾರಿಯ ಮೇದರಕೇತಯ್ಯ ನಗರದ ಓರ್ವ ಮತ್ತು ಹಂವಂಬಾಯಿ ಪ್ರದೇಶದ ಮತ್ತೋರ್ವ ವ್ಯಕ್ತಿಯಲ್ಲಿ ಪಾಸಿಟಿವ್ ಬಂದಿದೆ. ಈವರೆಗೆ ಜಿಂದಾಲ್ ಕಾರ್ಖಾನೆಯಲ್ಲಿ ಕೆಲಸ ಮಾಡುವ ಐದು ಜನರಲ್ಲಿ ಮತ್ತು ಅವರ ಸಂಪರ್ಕದಲ್ಲಿದ್ದ 8 ಜನರಲ್ಲಿ ಕೊರೋನ ಸೋಂಕು ಕಾಣಿಸಿಕೊಂಡಿದೆ. ಕಾರ್ಖಾನೆಯ ಕಾರ್ಮಿಕರಲ್ಲಿ ಕೊರೋನ ಕಾಣಿಸಿಕೊಂಡಿರುವುದರಿಂದ ಅಲ್ಲಿ ಹೆಚ್ಚಿನ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News