×
Ad

ಜೂ.15 ರಿಂದ ಮೀನುಗಾರಿಕೆ ನಿಷೇಧ

Update: 2020-06-10 23:39 IST

ಕಾರವಾರ. ಜೂ.10: ಕೇಂದ್ರ ಸರ್ಕಾರವು ಪ್ರಸಕ್ತ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ಪಶ್ಚಿಮ ಕರಾವಳಿಯ ವಿಶೇಷ ಆರ್ಥಿಕ ವಲಯದಲ್ಲಿ ಜೂನ್ 15 ರಿಂದ ಜುಲೈ 31ರವರೆಗೆ ಒಟ್ಟು 47 ದಿನಗಳ ಅವಧಿಗೆ ಇಳಿಕೆ ಮಾಡಿ ಮೀನುಗಾರಿಕೆ ನಿಷೇಧ ಅವಧಿಯನ್ನು ಜಾರಿ ಮಾಡಿ ಆದೇಶ ಹೊರಡಿಸಿದೆ ಎಂದು ಜಿಲ್ಲಾ ಮೀನುಗಾರಿಕೆ ಇಲಾಖೆ ಉಪನಿರ್ದೇಶಕರಾದ ಪಿ. ನಾಗರಾಜ ಅವರು ಬುಧವಾರ ತಿಳಿಸಿದ್ದಾರೆ.  

ಉತ್ತರ ಕನ್ನಡ ಜಿಲ್ಲೆಯೂ ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು/ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕೆ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ನಿಷೇಧಿಸಲಾಗಿದೆ.  

ಸರ್ಕಾರದ ಈ ಅಧಿಸೂಚನೆಯನ್ನು ಉಲ್ಲಂಘಿಸಿದ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ 1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆ ಆಗುವುದಲ್ಲದೆ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡಿಸೇಲ್ ಪಡೆಯಲು ಮತ್ತು ಕೇಂದ್ರ ಅಬಕಾರಿ ತೆರಿಗೆ ಮರುಪಾವತಿಯನ್ನು ಪಡೆಯಲು ಅನರ್ಹರಾಗಿದ್ದಾರೆಂದು ತಿಳಿಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News