ಉಡುಪಿಯಲ್ಲಿ ವಿಶ್ವ ಪರಿಸರ ದಿನಾಚರಣೆ
Update: 2020-06-11 18:12 IST
ಉಡುಪಿ, ಜೂ.11: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ, ಮೆಸ್ಕಾಂ ಉಡುಪಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ ಇವರ ಸಹಯೋಗದಲ್ಲಿ ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಅವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪರಿಸರ ಅಧಿಕಾರಿ ವಿಜಯ ಹೆಗ್ಡೆ, ಮೆಸ್ಕಾಂನ ಅಧೀಕ್ಷಕ ಇಂಜಿನಿಯರ್ ನರಸಿಂಹ ಕಾಮತ್ ಹಾಗೂ ಮೆಸ್ಕಾಂ ಮತ್ತು ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಉಪಸ್ಥಿತರಿದ್ದರು.