×
Ad

ಪಿಯುಸಿ ವರೆಗೆ ಆನ್‍ಲೈನ್ ಕ್ಲಾಸ್ ರದ್ದುಪಡಿಸಿ: ಮಾಜಿ ಸಿಎಂ ಸಿದ್ದರಾಮಯ್ಯ

Update: 2020-06-11 18:52 IST

ಬೆಂಗಳೂರು, ಜೂ. 11: ಎಲ್‍ಕೆಜಿ, ಯುಕೆಜಿ ಸೇರಿದಂತೆ ಐದನೆ ತರಗತಿಯವರೆಗೆ ಆನ್‍ಲೈನ್ ಕ್ಲಾಸ್ ರದ್ದುಪಡಿಸಿರುವುದು ಸ್ವಾಗತಾರ್ಹ. ಅದನ್ನು ಪಿಯುಸಿಯವರೆಗೆ ವಿಸ್ತರಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಗುರುವಾರ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಅಕ್ಟೋಬರ್ ವರೆಗೂ ಶಾಲೆಗಳನ್ನು ಆರಂಭಿಸುವುದು ಬೇಡ, ನಂತರದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆ ತೆರೆಯುವ ಬಗ್ಗೆ ಚಿಂತಿಸಬಹುದು, ಈ ಬಗ್ಗೆ ಅವಸರ ಬೇಡ ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

ಜ್ವರ ಮತ್ತು ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ಮೃತಪಟ್ಟ ಶಂಕಿತ ಕೊರೋನ ಸೋಂಕಿತರ ಕೋವಿಡ್ ಪರೀಕ್ಷೆ ನಡೆಸುವುದನ್ನು ಕೈಬಿಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸರಕಾರದ ನಿರ್ಧಾರ ಅನುಮಾನಕ್ಕೆಡೆಮಾಡಿದೆ. ಕೊರೋನ ಸೋಂಕಿತರ ಸಾವಿನ ಸಂಖ್ಯೆಯನ್ನು ಮುಚ್ಚಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಆರೋಪ ತಳ್ಳಿಹಾಕಲಾಗದು

-ಸಿದ್ದರಾಮಯ್ಯ, ವಿಪಕ್ಷ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News