ನ್ಯಾಯಬೆಲೆ ಅಂಗಡಿಗಳಲ್ಲಿ ರಾತ್ರಿ 8 ಗಂಟೆವರೆಗೂ ಪಡಿತರ ವಿತರಣೆ: ಸಚಿವ ಕೆ.ಗೋಪಾಲಯ್ಯ

Update: 2020-06-11 13:38 GMT

ಬೀದರ್, ಜೂ.11: ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ರಾತ್ರಿ 8ಗಂಟೆವರೆಗೂ ಪಡಿತರ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

ಗುರುವಾರ ಬೀದರ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಲಿ ಕೆಲಸ ಮಾಡುವವರು, ಒಂದು ದಿನ ರಜೆ ಹಾಕಿ ಪಡಿತರ ಸಾಮಗ್ರಿಗಳನ್ನು ಪಡೆಯುತ್ತಿದ್ದಾರೆ. ಇದರಿಂದ, ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಸಮಸ್ಯೆಯನ್ನು ಹೋಗಲಾಡಿಸಲು ರಾತ್ರಿ 8ಗಂಟೆವರೆಗೂ ಪಡಿತರ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಲಾಕ್‍ಡೌನ್ ಹಿನ್ನೆಲೆಯಲ್ಲಿ ಪಡಿತರ ಇಲ್ಲದವರಿಗೂ ಪಡಿತರವನ್ನು ವಿತರಿಸುವ ಕೆಲಸವಾಗಿದೆ. ಕೂಲಿ ಕಾರ್ಮಿಕರಿಗೆ ಹೆಚ್ಚುವರಿ ಪಡಿತರ ಸಾಮಗ್ರಿಗಳನ್ನೂ ವಿತರಿಸಲಾಗಿದೆ. ಇನ್ನು ಮುಂದೆ ರಾತ್ರಿ 8 ಗಂಟೆವರೆಗೂ ಪಡಿತರ ಸಾಮಗ್ರಿಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News