ವಿಧಾನ ಪರಿಷತ್ ನ ಏಳು ಸ್ಥಾನಗಳ ಚುನಾವಣೆಗೆ ಅಧಿಸೂಚನೆ ಪ್ರಕಟ

Update: 2020-06-11 14:34 GMT

ಬೆಂಗಳೂರು, ಜೂ. 11: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಗೊಂಡಿದ್ದ ಏಳು ಮಂದಿ ಸದಸ್ಯರ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಗಳನ್ನು ತುಂಬಲು ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ ಜೂ.29ಕ್ಕೆ ನಡೆಯಲಿದ್ದು, ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಗುರುವಾರ ಅಧಿಸೂಚನೆ ಹೊರಡಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಜೂ.18 ಕೊನೆಯ ದಿನವಾಗಿದ್ದು, ಜೂ.19ಕ್ಕೆ ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಜೂ.22ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.29ರ ಬೆಳಗ್ಗೆ 9ರಿಂದ ಸಂಜೆ 4ಗಂಟೆಯ ವರೆಗೆ ನಡೆಯಲಿರುವ ಚುನಾವಣೆಯಲ್ಲಿ ಶಾಸಕರು ಮತದಾನ ಮಾಡಲಿದ್ದು, ಅದೇ ದಿನ ಸಂಜೆ 5ಗಂಟೆಗೆ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ನಾಮಪತ್ರಗಳನ್ನು ಬೆಳಗ್ಗೆ 11ರಿಂದ ಮಧ್ಯಾಹ್ನ 3ಗಂಟೆ ವರೆಗೆ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ-121ರಲ್ಲಿ ಚುನಾವಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News