ಬೆಂಗಳೂರು: ಕಂಟೈನ್‍ಮೆಂಟ್ ಝೋನ್ ಗಳ ಸಂಖ್ಯೆ 85ಕ್ಕೆ ಏರಿಕೆ
Update: 2020-06-11 20:07 IST
ಬೆಂಗಳೂರು, ಜೂ.11: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಕಂಟೈನ್‍ಮೆಂಟ್ ಝೋನ್ ಗಳ ಸಂಖ್ಯೆ 85ಕ್ಕೆ ಏರಿಕೆಯಾಗಿದೆ.
ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ಹಂಪಿನಗರ ಹಾಗೂ ವಿದ್ಯಾಪೀಠ ವಾರ್ಡ್‍ಗಳು, ಪಶ್ಚಿಮ ವಲಯದಲ್ಲಿ ರಾಜಮಹಲ್ ಗುಟ್ಟಹಳ್ಳಿ, ಶ್ರೀರಾಮಮಂದಿರ, ಗಾಂಧಿನಗರ, ಮಹಾಲಕ್ಷ್ಮಿ ಲೇಔಟ್ ವಾರ್ಡ್‍ಗಳು, ಯಲಹಂಕ ವಲಯದಲ್ಲಿ ವಿದ್ಯಾರಣ್ಯಪುರ ಹಾಗೂ ದಾಸರಹಳ್ಳಿ ವಲಯದಲ್ಲಿ ಶೆಟ್ಟಿಹಳ್ಳಿ ವಾರ್ಡ್ ಗಳನ್ನು ಕಂಟೈನ್‍ಮೆಂಟ್ ಪ್ರದೇಶಗಳೆಂದು ಗುರುತಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೆ ಒಟ್ಟು 50,415 ಮಂದಿಯನ್ನು ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಬಿಬಿಎಂಪಿ ಆಧಿಕಾರಿಗಳು ಮಾಹಿತಿ ನೀಡಿದ್ದಾರೆ.