×
Ad

ಸಂಪೂರ್ಣ ಸ್ಯಾನಟೈಸ್‌ಗೊಳಗಾದ ಉಡುಪಿ ಬೋರ್ಡ್ ಹೈಸ್ಕೂಲ್

Update: 2020-06-11 21:33 IST

ಉಡುಪಿ, ಜೂ.11: ಜೂ.18ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಪ್ರಯುಕ್ತ, ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳನ್ನು ಕೋವಿಡ್-19 ಪ್ರಯುಕ್ತ ಕ್ವಾರಂಟೈನ್‌ಗೆ ಬಳಸಿದ್ದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಅಂತಹ ಕೇಂದ್ರಗಳನ್ನು ಸಂಪೂರ್ಣ ಸ್ಯಾನಟೈಸ್ ಮಾಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಅದರಂತೆ ಗುರುವಾರ ಉಡುಪಿಯ ಬೋರ್ಡ್ ಹೈಸ್ಕೂಲನ್ನು ಉಡುಪಿ ನಗರಸಭೆಯ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಅವರ ನೇತೃತ್ವದಲ್ಲಿ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಯಿತು.

ಇನ್ನು ಪರೀಕ್ಷೆಗೆ ಮೂರು ದಿನ ಮುನ್ನ ಇನ್ನೊಮ್ಮೆ ಸ್ಯಾನಟೈಸ್ ಗೊಳಪಡಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News