×
Ad

ಶಾಲಾ ಶುಲ್ಕಕ್ಕೆ ಒತ್ತಡ ಹೇರಿದರೆ ನಿರ್ದಾಕ್ಷಿಣ್ಯ ಕ್ರಮ: ಡಿಡಿಪಿಐ

Update: 2020-06-11 21:37 IST

ಮಂಗಳೂರು, ಜೂ.11: ಶಾಲಾ ಶುಲ್ಕ ಪಾವತಿಸಲು ಸಾಧ್ಯವಿಲ್ಲದ/ ಪಾವತಿಸಲು ನಿರಾಕರಿಸುವ ಪೋಷಕರಿಂದ ಯಾವುದೇ ಕಾರಣಕ್ಕೂ ಶುಲ್ಕ ವಸೂಲು ಮಾಡುವಂತಿಲ್ಲ. ಒತ್ತಡ ಹೇರಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

ಶಾಲೆಗಳು ಶುಲ್ಕ ಕಟ್ಟುವ ವಿಷಯದಲ್ಲಿ ವಿದ್ಯಾರ್ಥಿ ಪೋಷಕರಿಗೆ ಯಾವುದೇ ರೀತಿಯ ಒತ್ತಡ ಹೇರಬಾರದು. ಶುಲ್ಕವನ್ನು ಪಾವತಿಸದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿರುವ ಕುರಿತು ಯಾವುದೇ ದೂರುಗಳು ಬಂದಲ್ಲಿ ಅಂತಹ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಕ್ಷಣ ಹಕ್ಕು ಕಾಯ್ದೆಯಡಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ದ.ಕ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಖಾಸಗಿ ಶಾಲೆಗಳಿಗೆ ಎಚ್ಚರಿಸಿದ್ದಾರೆ.

ಜಿಲ್ಲೆಯಲ್ಲಿ ಕೆಲವು ಖಾಸಗಿ ಶಾಲೆಗಳು ಶಾಲಾ ಶುಲ್ಕವನ್ನು ವಸೂಲು ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಪೋಷಕರಿಂದ ದೂರವಾಣಿ ಮೂಲಕ ಹಲವು ದೂರುಗಳು ಬರುತ್ತಿವೆ. ಹೆಚ್ಚು ಶುಲ್ಕಕ್ಕೆ ಒತ್ತಡ ಹೇರುವ ಶಾಲೆಗಳ ವಿರುದ್ಧ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರಕ್ಕೆ ವರದಿ ಮಾಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News