ಎಸ್ಟಿ ವರ್ಗದ ಕಾನೂನು ಪದವೀಧರಿಗೆ ಅರ್ಜಿ ಆಹ್ವಾನ
Update: 2020-06-11 22:22 IST
ಮಂಗಳೂರು, ಜೂ.11: ಪ್ರಸಕ್ತ 2020-21ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08255-230986 ಅಥವಾ ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ತಾಲೂಕು ಕಚೇರಿಯನ್ನು ಸಂಪರ್ಕಿಸಲು ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟನೆ ತಿಳಿಸಿದೆ.