ಕೆಸಿಎಫ್ ರಿಯಾದ್ ಝೊನ್ ಸಮಿತಿಯಿಂದ ಆ್ಯಂಬುಲೆನ್ಸ್ ಕೀ ಹಸ್ತಾಂತರ
Update: 2020-06-11 22:45 IST
ಮಂಗಳೂರು : ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೊನ್ ಸಮಿತಿ ವತಿಯಿಂದ ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನಿಗೆ ಆ್ಯಂಬುಲೆನ್ಸ್ ಕೀ ಹಸ್ತಾಂತರ ಕಾರ್ಯಕ್ರಮವು ಜೂ.12ರಂದು ಸಂಜೆ 4 ಗಂಟೆಗೆ ಕೆಸಿ ರೋಡ್ ಜಂಕ್ಷನ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್ ರಾಷ್ಟ್ರೀಯ ನಾಯಕರು, ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಇನ್ನಿತರ ಸಾಮಾಜಿಕ, ಧಾರ್ಮಿಕ, ರಾಜಕೀಯ ನಾಯಕರು ಭಾಗವಹಿಸಲಿದ್ಧಾರೆ ಎಂದು ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ಪ್ರಧಾನ ಕಾರ್ಯದರ್ಶಿ ಜಾಫರ್ ಯು ಎಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.