ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ಸೇರಿ 23 ಆರೋಪಿಗಳಿಗೆ ನ್ಯಾಯಾಂಗ ಬಂಧನ

Update: 2020-06-12 11:53 GMT

ಬೆಂಗಳೂರು, ಜೂ.12: ಪಾದರಾಯನಪುರದ ಕಾರ್ಪೊರೇಟರ್ ಇಮ್ರಾನ್ ಪಾಷಾ ಸೇರಿ ಒಟ್ಟು 23 ಆರೋಪಿಗಳಿಗೆ 5ನೆ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಇಮ್ರಾನ್ ಪಾಷಾ ಕೊರೋನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ, ಗುಣಮುಖರಾಗಿ ಬಂದ ದಿನ ಅನುಮತಿ ಪಡೆಯದೆ, ಕೊರೋನ ನಿಯಮವನ್ನ ಗಾಳಿಗೆ ತೂರಿ ರೋಡ್ ಶೋ ನಡೆಸಿದ್ದರು. ಅಲ್ಲದೆ, ಇದನ್ನ ಪ್ರಶ್ನೆ ಮಾಡಿದ ಪೊಲೀಸರಿಗೆ ಅವರ ಬೆಂಬಲಿಗರು ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ನಂತರ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇವರನ್ನು ಬಂಧಿಸಿದ್ದರು.

ಇಂದು ಬಂಧಿತ 23 ಮಂದಿಯನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆ ನಡೆಸಿತು. ವಿಚಾರಣೆ ಬಳಿಕ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಇನ್ನು ಬಂಧಿತರಲ್ಲಿ ಕೆಲವರಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News