ಕೋವಿಡ್ -19 ಹಿನ್ನೆಲೆ: ಮೀನುಗಾರಿಕಾ ನಿಷೇಧ ಅವಧಿ 61ರಿಂದ 47ದಿನಗಳಿಗೆ ಕಡಿತ
ಮಂಗಳೂರು : ಕೋವಿಡ್-19ರ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪ್ರಸಕ್ತ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ಪಶ್ಚಿಮ ಕರಾವಳಿಯ ವಿಶೇಷ ಆರ್ಥಿಕ ವಲಯದಲ್ಲಿ ಮೀನುಗಾ ರಿಕಾ ನಿಷೇಧ ಅವಧಿಯನ್ನು 61ದಿನಗಳಿಂದ 47ದಿನಗಳಿಗೆ ಕಡಿತಗೊಳಿಸಿದೆ. ಇದರಿಂದಾಗಿ ಜೂ.15 ರಿಂದ ಜುಲೈ 31ರ ವರೆಗೆ ಒಟ್ಟು 47 ದಿನಗಳ ಅವಧಿಗೆ ಮೀನುಗಾರಿಕೆ ನಿಷೇಧ ಅವಧಿಯನ್ನು ಜಾರಿ ಮಾಡಿ ಆದೇಶ ಹೊರಡಿಸಿದೆ ಎಂದು ಜಿಲ್ಲಾ ಮೀನುಗಾರಿಕೆ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ ಹೇರಲಾಗುತ್ತಿತ್ತು. ಈ ಸಂದರ್ಭದಲ್ಲಿ ಯಾವುದೇ ಬಲೆಗಳನ್ನು/ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ)ಸಾಮರ್ಥ್ರ್ಯ ಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ ಅಥವಾ ಔಟ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕೆ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ನಿಷೇದಿಸಲಾಗಿರು ತ್ತದೆ. ಸರ್ಕಾರದ ಈ ಅಧಿಸೂಚನೆಯನ್ನು ಉಲ್ಲಂಘಿಸಿದ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ 1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆ ಆಗುವುದಲ್ಲದೆ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡಿಸೇಲ್ ಪಡೆಯಲು ಮತ್ತು ಕೇಂದ್ರ ಅಬಕಾರಿ ತೆರಿಗೆ ಮರುಪಾವತಿಯನ್ನು ಪಡೆಯಲು ಅನರ್ಹರಾಗುತ್ತಾರೆಂದು ಎಂದು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.