×
Ad

ಸರಕಾರಿ ನೌಕರರು ಬಿಪಿಎಲ್ ಕಾರ್ಡ್ ಹಿಂದಿರುಗಿಸದಿದ್ದರೆ ಶಿಸ್ತು ಕ್ರಮ: ಸರಕಾರದ ಮುಖ್ಯ ಕಾರ್ಯದರ್ಶಿ ಎಚ್ಚರಿಕೆ

Update: 2020-06-12 18:20 IST
ಟಿ.ಎಂ.ವಿಜಯಭಾಸ್ಕರ್

ಬೆಂಗಳೂರು, ಜೂ.12: ಬಿಪಿಎಲ್ ಪಡಿತರ ಹೊಂದಿರುವ ಸರಕಾರಿ ನೌಕರರು ಒಂದು ತಿಂಗಳೊಳಗೆ ಸರಕಾರಕ್ಕೆ ಹಿಂದಿರುಗಿಸಬೇಕು. ಇಲ್ಲದಿದ್ದರೆ, ಶಿಸ್ತು ಕ್ರಮ ಜರುಗಿಸಲಾಗುವುದೆಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಅವರು, ಸರಕಾರಿ, ಸರಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯದ ಅಧಿಕಾರಿ ನೌಕರರು ಮತ್ತು ಅವಲಂಬಿತ ಕುಟುಂಬ ವರ್ಗದವರು ಬಿಪಿಎಲ್ ಕಾರ್ಡ್‍ಗಳನ್ನು ಪಡೆದುಕೊಂಡು ಬಡವರಿಗೆ ಮೀಸಲಾಗಿದ್ದ ಸರಕಾರಿ ಸೌಲಭ್ಯಗಳನ್ನ ಅನುಭವಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ.

ಬಡವರಿಗೆ ಮೀಸಲಾಗಿದ್ದ ಸರಕಾರಿ ಸೌಲಭ್ಯಗಳನ್ನು ಸರಕಾರಿ ನೌಕರರು ಪಡೆದುಕೊಳ್ಳುವುದು ಅಕ್ಷಮ್ಯ ಅಪರಾಧ. ಹೀಗಾಗಿ ಒಂದು ತಿಂಗಳೊಳಗೆ ಪಡಿತರವನ್ನು ಹಿಂದಿರುಗಿಸಬೇಕು. ಇಲ್ಲದಿದ್ದರೆ, ಈ ಸಂಬಂಧ ದೂರು ಬಂದರೆ ಕ್ರಿಮಿನಲ್ ಮೊಕದ್ದಮೆ ಹೂಡಿ, ಸರಕಾರಕ್ಕೆ ಅವರಿಂದ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News