×
Ad

ಪ್ರತ್ಯೇಕ ಪ್ರಕರಣ: ಅಪರಿಚಿತ ವ್ಯಕ್ತಿಗಳ ಶವ ಪತ್ತೆ

Update: 2020-06-12 22:11 IST

ಗಂಗೊಳ್ಳಿ, ಜೂ.12: ನಾಡ ಗ್ರಾಮದ ಕುರು ಎಂಬಲ್ಲಿರುವ ಸೌಪರ್ಣಿಕ ಹೊಳೆಯ ದಡದ ಬದಿಯ ಕಾಡುಪೊದೆಗಳ ಎಡೆಯಲ್ಲಿ ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಪತ್ತೆಯಾಗಿದೆ.

ಈ ವ್ಯಕ್ತಿ ಎರಡು ದಿನಗಳ ಹಿಂದೆ ನದಿಗೆ ಬಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಬಂದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಮಲ್ಪೆ ಪಡುಕರೆಯ ಪಾಪನಾಶಿನಿ ನದಿಯ ದಡದಲ್ಲಿ 40 ವರ್ಷ ಪ್ರಾಯ ಅಪರಿಚಿತ ಗಂಡಸಿನ ಮೃತದೇಹ ಇಂದು ಬೆಳಗ್ಗೆ 7ಗಂಟೆ ಸುಮಾರಿಗೆ ಪತ್ತೆಯಾಗಿದೆ. ಈ ವ್ಯಕ್ತಿ ಸಮುದ್ರದಲ್ಲಿ ಅಥವಾ ನದಿ ನೀರಿಗೆ ಆಕಸ್ಮಿಕವಾಗಿ ಅಥವಾ ಇನ್ಯಾವುದೋ ರೀತಿಯಲ್ಲಿ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News