ರಾಜ್ಯಸಭಾ ಸ್ಥಾನದ ಆಕಾಂಕ್ಷಿಯಾಗಿದ್ದೆನೇ ಹೊರತು ವಿಧಾನ ಪರಿಷತ್ ಸ್ಥಾನದ ಆಕಾಂಕ್ಷಿಯಲ್ಲ: ಪ್ರಕಾಶ್ ಶೆಟ್ಟಿ

Update: 2020-06-13 08:44 GMT

ಬೆಂಗಳೂರು, ಜೂ.13: ‘‘ನಾನು ರಾಜ್ಯಸಭಾ ಸ್ಥಾನದ ಆಕಾಂಕ್ಷಿಯಾಗಿದ್ದೆನೇ ಹೊರತು ವಿಧಾನ ಪರಿಷತ್ ಸದಸ್ಯ ಸ್ಥಾನದ ಆಕಾಂಕ್ಷಿ ಅಲ್ಲ’’ ಎಂದು ಎಂಆರ್‌ಜಿ ಗ್ರೂಪ್‌ನ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

‘‘ನಾನು ಕಳೆದ ಹಲವು ವರ್ಷಗಳಿಂದ ಭಾರತೀಯ ಜನತಾ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಇತ್ತೀಚೆಗೆ ನನಗೆ ರಾಜ್ಯಸಭಾ ಸದಸ್ಯರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ರಾಜ್ಯ ಬಿಜೆಪಿ ಕೋರ್ ಕಮಿಟಿಯು ಹೈಕಮಾಂಡ್‌ಗೆ ಶಿಫಾರಸು ಮಾಡಿತ್ತು. ಆದರೆ ಪಕ್ಷದ ಸಂಘಟನೆ ಹಾಗೂ ಬೆಳವಣಿಗೆಯ ದೃಷ್ಟಿಯಿಂದ ಇಬ್ಬರು ಹಿರಿಯ ಕಾರ್ಯಕರ್ತರನ್ನು ಹೈಕಮಾಂಡ್ ಈ ಸ್ಥಾನಕ್ಕೆ ಆಯ್ಕೆ ಮಾಡಿದೆ. ವ್ಯಕ್ತಿಗಿಂತ ಪಕ್ಷ ಮುಖ್ಯ ಎನ್ನುವ ಸಾರ್ವಕಾಲಿಕ ಸತ್ಯವನ್ನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನಾನು ಒಪ್ಪಿಕೊಂಡು ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸುತ್ತೇನೆ’’ ಎಂದು ತಿಳಿಸಿದ್ದಾರೆ.

‘‘ಈ ಮಧ್ಯೆ ವಿಧಾನ ಪರಿಷತ್ ಸ್ಥಾನದ ಆಕಾಂಕ್ಷಿ ಎಂಬಂತೆ ನನ್ನನ್ನು ಬಿಂಬಿಸಲಾಗಿದೆ. ಆದರೆ ನಾನು ರಾಜ್ಯಸಭಾ ಸ್ಥಾನದ ಆಕಾಂಕ್ಷಿಯೇ ಹೊರತು ವಿಧಾನ ಪರಿಷತ್ ಸದಸ್ಯ ಸ್ಥಾನದ ಆಕಾಂಕ್ಷಿಯಲ್ಲ’’ ಎಂದು ಪ್ರಕಾಶ್ ಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News