'ಪಾಕಿಸ್ತಾನ ಝಿಂದಾಬಾದ್' ಘೋಷಣೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ ಆರೋಪ; ಇನ್ಸ್ ಪೆಕ್ಟರ್ ಅಮಾನತು

Update: 2020-06-13 12:10 GMT
 ಜಾಕ್ಸನ್ ಡಿಸೋಜಾ

ಹುಬ್ಬಳ್ಳಿ, ಜೂ.13: ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ್ದಾರೆನ್ನಲಾದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ ಮಾಡಿದ ಆರೋಪ ಹಿನ್ನೆಲೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರೊರ್ವರನ್ನು ಅಮಾನತು ಮಾಡಲಾಗಿದೆ.

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಜಾಕ್ಸನ್ ಡಿಸೋಜಾ ಅವರನ್ನು ಅಮಾನತು ಮಾಡಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಆದೇಶ ಹೊರಡಿಸಿದ್ದಾರೆ.

ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಬಗ್ಗೆ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ ಮಾಡಿದ ಕಾರಣಕ್ಕಾಗಿ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇಲ್ಲಿನ ಕೆಎಲ್‍ಇ ಇಂಜಿನಿಯರಿಂಗ್ ಕಾಲೇಜ್‍ನ ಮೂವರು ವಿದ್ಯಾರ್ಥಿಗಳಾದ ಬಾಸಿತ್ ಸೋಪಿ, ತಾಲೀಬ್ ವಾನಿ ಅಮೀರ್, ಮೊಯಿನುದ್ದೀನ್ ವಾನಿ ಘೋಷಣೆ ಕೂಗಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಆರೋಪಿಗಳನ್ನು ನ್ಯಾಯಾಂಗ ಬಂಧನಲ್ಲಿಡಲಾಗಿತ್ತು. ಆದರೆ, 90 ದಿನಗಳ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕಾಗಿದ್ದರೂ, ಸಲ್ಲಿಸಲಿರಲಿಲ್ಲ. ಇದೇ ಕಾರಣಕ್ಕೆ ಆರೋಪಿಗಳಿಗೆ ಇತ್ತೀಚೆಗೆ ಜಾಮೀನು ದೊರೆತಿತ್ತು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News