ಉಡುಪಿ: ಶನಿವಾರ 63 ಗಂಟಲು ದ್ರವ ಮಾದರಿ ಪರೀಕ್ಷೆಗೆ
ಉಡುಪಿ, ಜೂ.13: ನೋವೆಲ್ ಕೊರೋನ ವೈರಸ್ (ಕೋವಿಡ್-19) ಗಾಗಿ ನಡೆಸಿದ ಪರೀಕ್ಷೆಯಲ್ಲಿ ಶನಿವಾರ 15 ಪಾಸಿಟಿವ್ ಆಗಿ ಬಂದಿದ್ದರೆ, 29 ಸ್ಯಾಂಪಲ್‌ಗಳ ವರದಿ ನೆಗೆಟಿವ್ ಆಗಿ ಬಂದಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.
ಇದರೊಂದಿಗೆ ಇಂದು ಕೋವಿಡ್-19ರ ಗುಣಲಕ್ಷಣವಿರುವ 63 ಮಂದಿ ಯ ಗಂಟಲುದ್ರವ ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇವರಲ್ಲಿ ಒಬ್ಬರು ಕೋವಿಡ್ ಸಂಪರ್ಕಿತರಾದರೆ, ಒಬ್ಬರು ಉಸಿರಾಟದ ತೊಂದರೆಯಿಂದ, ಎಂಟು ಮಂದಿ ಶೀತಜ್ವರದಿಂದ ಬಳಲುವ ವರು. ಉಳಿದಂತೆ 53 ಮಂದಿ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಬಂದವರ ಮಾದರಿಗಳನ್ನು ಸಹ ಪರೀಕ್ಷೆಗೆ ಕಳುಹಿಸಾಗಿದೆ ಎಂದು ಡಾ.ಸೂಡ ವಿವರಿಸಿದರು.
ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಒಟ್ಟು ಮಾದರಿಗಳ ಸಂಖ್ಯೆ 12,830ಕ್ಕೇರಿದೆ. ಇವುಗಳಲ್ಲಿ ಇಂದು ಸಂಜೆಯವರೆಗೆ ಒಟ್ಟು 11,734 ನೆಗೆಟಿವ್ ಆಗಿ ಬಂದರೆ, 1005 ಸ್ಯಾಂಪಲ್ ಪಾಸಿಟಿವ್ ಬಂದಿವೆ. ಹೀಗಾಗಿ ಇನ್ನು 90 ಸ್ಯಾಂಪಲ್‌ಗಳ ವರದಿ ಇನ್ನಷ್ಟೇ ಬರಬೇಕಿದೆ ಎಂದವರು ಹೇಳಿದರು.
ಐಸೋಲೇಷನ್ ವಾರ್ಡಿಗೆ 11 ಮಂದಿ: ಇಂದು ರೋಗದ ಗುಣ ಲಕ್ಷಣದೊಂದಿಗೆ 8 ಮಂದಿ ಪುರುಷರು ಹಾಗೂ ಮೂವರು ಮಹಿಳೆಯರು ಸೇರಿ ಒಟ್ಟು 11 ಮಂದಿ ಐಸೋಲೇಷನ್ ವಾರ್ಡ್‌ಗಳಿಗೆ ದಾಖಲಾಗಿದ್ದಾರೆ. ಇವರಲ್ಲಿ ಕೊರೋನ ಶಂಕಿತರು ಒಬ್ಬರು, ಉಸಿರಾಟದ ತೊಂದರೆಯವರು 7 ಮಂದಿ ಹಾಗೂ ಶೀತಜ್ವರದಿಂದ ಬಾಧಿತರಾದ ಮೂವರು ಸೇರಿದ್ದಾರೆ.
ಜಿಲ್ಲೆಯ ವಿವಿಧ ಆಸ್ಪತ್ರೆಗಳ ಐಸೋಲೇಶನ್ ವಾರ್ಡ್‌ಗಳಿಂದ ಇಂದು 18 ಮಂದಿ ಬಿಡುಗಡೆಗೊಂಡಿದ್ದು, 75 ಮಂದಿ ಇನ್ನೂ ವೈದ್ಯರ ನಿಗಾ ದಲ್ಲಿದ್ದಾರೆ. ಜಿಲ್ಲೆಯಲ್ಲಿ ಕೊರೋನ ಸೋಂಕಿನ ಗುಣಲಕ್ಷಣದ ಏಳು ಮಂದಿ ಸೇರಿದಂತೆ ಈವರೆಗೆ ಜಿಲ್ಲೆಯಲ್ಲಿ ಒಟ್ಟು 5398 ಮಂದಿಯನ್ನು ಕೊರೋನ ತಪಾಸಣೆಗೆ ನೊಂದಾಯಿಸಿಕೊಳ್ಳಲಾಗಿದೆ. ಇವರಲ್ಲಿ 4750 ಮಂದಿ 28 ದಿನಗಳ ಹಾಗೂ 4853 ಮಂದಿ 14 ದಿನಗಳ ನಿಗಾವಣೆಯನ್ನು ಪೂರೈಸಿದ್ದಾರೆ.
ಜಿಲ್ಲೆಯಲ್ಲಿ ಈಗಲೂ 466 ಮಂದಿ ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದರು.