ಕೆಪಿಸಿಸಿ ಅಧ್ಯಕ್ಷರ ಜೊತೆ ಚರ್ಚೆ ನಡೆಸಿಲ್ಲ: ರೋಷನ್ ಬೇಗ್ ಸ್ಪಷ್ಟನೆ

Update: 2020-06-13 18:20 GMT

ಬೆಂಗಳೂರು, ಜೂ.13: ನಾನು ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರ್ಪಡೆಯಾಗುವ ಸಂಬಂಧ ಕೆಪಿಸಿಸಿ ಅಧ್ಯಕ್ಷರ ಜೊತೆ ಚರ್ಚೆ ನಡೆಸುತ್ತಿದ್ದೇನೆ ಎಂದು ಕೆಲವು ಪ್ರಾದೇಶಿಕ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಇದೆಲ್ಲ ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಮಾಜಿ ಸಚಿವ ಆರ್.ರೋಷನ್ ಬೇಗ್ ಸ್ಪಷ್ಟಣೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಯಾರನ್ನೂ ಸಂಪರ್ಕ ಮಾಡಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಆಧಾರ ರಹಿತವಾದದ್ದು. ನಾನು ನನ್ನ ಹಿತೈಷಿಗಳು, ಸ್ನೇಹಿತರು, ಕುಟುಂಬ ಹಾಗೂ ಬೆಂಗಳೂರು ಸೇರಿದಂತೆ ಇನ್ನಿತರೆಡೆ ಇರುವ ನಾಗರಿಕ ಸೇವಾ ಸಂಘಟನೆಗಳೊಂದಿಗೆ ಸೇರಿಕೊಂಡು ರಾಜಕೀಯ, ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಸಂತೋಷವಾಗಿದ್ದೇನೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News