ಬೆಂಗಳೂರು: ವಿದೇಶಿ ಯುವತಿಯ ಸಾಮೂಹಿಕ ಅತ್ಯಾಚಾರ; ನಾಲ್ವರು ಆರೋಪಿಗಳ ಬಂಧನ

Update: 2020-06-14 12:07 GMT

ಬೆಂಗಳೂರು, ಜೂ.14: ನೈಜೀರಿಯಾ ಮೂಲದ ಯುವತಿಯ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಇಲ್ಲಿನ ತಲಘಟ್ಟಪುರ ಠಾಣಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಆಟೋ ಚಾಲಕ ಶಿವಶಂಕರ್, ಶ್ರೀಧರ್, ಗೋಪಿ ಮತ್ತು ಹರೀಶ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಗರದ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ 25 ವರ್ಷದ ನೈಜೀರಿಯಾ ಯುವತಿಗೆ ಎರಡು ತಿಂಗಳ ಹಿಂದೆ ಶಿವಶಂಕರ್ ಪರಿಚಯವಾಗಿದ್ದಾನೆ. ಮೇ 10ರಂದು ಕರೆ ಮಾಡಿ ಯುವತಿಯನ್ನು ಕರೆಸಿಕೊಂಡಿದ್ದ ಶಿವಶಂಕರ್ ಆಟೋದಲ್ಲಿ ಕರೆದುಕೊಂಡು ಹೊರಟಿದ್ದು, ಇದೇ ವೇಳೆ ಉಳಿದ ಮೂವರನ್ನು ಆಟೋಗೆ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News