ವಿಧಾನ ಪರಿಷತ್ ಚುನಾವಣೆ: ಜೂ.15ರಂದು ಬಿಜೆಪಿ ಕೋರ್ ಕಮಿಟಿ ಸಭೆ

Update: 2020-06-14 12:53 GMT

ಬೆಂಗಳೂರು, ಜೂ.14: ವಿಧಾನಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಚರ್ಚಿಸಲು ಜೂ.15ರಂದು ಸಂಜೆ 4 ಗಂಟೆಗೆ ಬಿಜೆಪಿ ಕೋರ್ ಕಮಿಟಿ ಸಭೆಯನ್ನು ಕರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ತಿಳಿಸಿದ್ದಾರೆ.

ರವಿವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ವಿಧಾನಪರಿಷತ್ತಿನ ಚುನಾವಣೆಗೆ ಯಾರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಯಲಿದೆ ಎಂದರು.

ಕೋರ್ ಕಮಿಟಿಯಲ್ಲಿ ಚರ್ಚಿಸಿದ ಬಳಿಕ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಸಮಿತಿಗೆ ಕಳುಹಿಸಲಾಗುವುದು. ಅಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ಸಿಗಲಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News