ಹಳ್ಳಿ ಜನರ ಜ್ವಲಂತ ಸಮಸ್ಯೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವೆ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

Update: 2020-06-14 18:00 GMT

ಬೆಳಗಾವಿ, ಜೂ.14: ಪಕ್ಷ ನನ್ನ ಶ್ರಮವನ್ನು ಗುರುತಿಸಿ ಕೊಡುಗೆ ನೀಡಿದೆ. ಈ ಅವಕಾಶವನ್ನು ಬಳಸಿಕೊಂಡು, ರೈತರ, ಬಡವರ, ಹಳ್ಳಿ ಜನರ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುವ ಆಶಯ ಹೊಂದಿದ್ದೇನೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.

ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಗೋಕಾಕ ನಗರದಲ್ಲಿರುವ ಶೂನ್ಯ ಸಂಪಾದನ ಮಠಕ್ಕೆ ರವಿವಾರ ಭೇಟಿ ನೀಡಿ ಮುರುಘರಾಜೇಂದ್ರ ಸ್ವಾಮೀಜಿ ಅವರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಇದಕ್ಕೆ ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ ಜಾರಕಿಹೊಳಿ ಅವರು ಟಿಕೆಟ್ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದ್ದರು. ಸದ್ಯ ಪಕ್ಷ ನನ್ನನ್ನು ಗುರುತಿಸಿ ರಾಜ್ಯಸಭಾ ಸದಸ್ಯನನ್ನಾಗಿ ಆಯ್ಕೆ ಮಾಡಿದ್ದು, ಖುಷಿ ತಂದಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೂಲಿಕಟ್ಟಿ ಶ್ರೀಮಠದ ಬಸವದೇವರು, ಮಲ್ಲಿಕಾರ್ಜುನ ಈಟಿ, ನಗರಸಭೆ ಸದಸ್ಯ ಎಸ್.ಎ.ಕೋತ್ವಾಲ್, ಚಂದ್ರಶೇಖ ಕೊಣ್ಣೂರ, ಶಾಮಾನಂದ ಪೂಜೇರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ, ನೋಟರಿ ಶಂಕರ ಗೋರೋಶಿ, ಶ್ರೀಶೈಲ ತುಪ್ಪದ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News