×
Ad

ಮಂಡ್ಯದಲ್ಲಿ ಒಂದೇ ದಿನ ಏಳು ಮಂದಿ ಜಲಸಮಾಧಿ: ಮುಖ್ಯಮಂತ್ರಿಯಿಂದ ಪರಿಹಾರ ಪ್ರಕಟ

Update: 2020-06-15 17:00 IST

ಬೆಂಗಳೂರು, ಜೂ. 15: ಜೂ.14ರಂದು ಮಂಡ್ಯ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜಲಸಮಾಧಿಯಾದ ಏಳು ಮಂದಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 23 ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೀರನಹಳ್ಳಿಯ ಗೀತಾ, ಕು.ಸವಿತಾ ಹಾಗೂ ಕು.ಸೌಮ್ಯ ಎಂಬವರು ಕಾಲು ಜಾರಿಗೆ ಕೆರೆಗೆ ಬಿದ್ದು ಮೃತಪಟ್ಟಿದ್ದು ಅವರಿಗೆ ತಲಾ 5 ಲಕ್ಷ ರೂ.ನಂತೆ ಪರಿಹಾರ ನೀಡಲಾಗುವುದು.

ಇದೇ ತಾಲೂಕಿನ ಚೋಳಸಂದ್ರ ಗ್ರಾಮದ ರಶ್ಮಿ ಮತ್ತು ಇಂಚರಾ, ಕೆ.ಆರ್.ಪೇಟೆ ತಾಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರುಗಳಿಗೆ ತಲಾ 2 ಲಕ್ಷ ರೂ.ಗಳನ್ನು ಪರಿಹಾರ ನಿಧಿಯಿಂದ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News