×
Ad

ಬಿಪಿಎಲ್ ಕ್ಷೌರಿಕರು, ಅಗಸರಿಗೆ ಪರಿಹಾರಧನಕ್ಕೆ ಅರ್ಜಿ ಆಹ್ವಾನ

Update: 2020-06-15 21:39 IST

ಮಂಗಳೂರು, ಜೂ.15: ಕೋವಿಡ್-19 ಹಿನ್ನೆಲೆಯಲ್ಲಿ 18ರಿಂದ 65 ವರ್ಷದೊಳಗಿನ ಕ್ಷೌರಿಕ ಮತ್ತು ಅಗಸ ವೃತ್ತಿ ನಿರ್ವಹಿಸುತ್ತಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರವಾಗಿ 5,000 ರೂ.ನ್ನು ಮಂಜೂರು ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಫಲಾನುಭವಿಗಳು ತಾವು ಕೆಲಸ ನಿರ್ವಹಿಸುತ್ತಿರುವ ವ್ಯಾಪ್ತಿಯ ಸೇವಾಸಿಂಧು ಕೇಂದ್ರದ ಸೇವಾಸಿಂಧು ಪೋರ್ಟಲ್‌ನಲ್ಲಿ ನಿಗದಿತ ಅರ್ಜಿಯಲ್ಲಿ ಮಾಹಿತಿ ಭರ್ತಿ ಮಾಡಿ, ಬ್ಯಾಂಕ್ ಖಾತೆಯೊಂದಿಗೆ ಜೋಡನೆಯಾಗಿರುವ ಆಧಾರ್ ಕಾರ್ಡ್, ವಿಳಾಸ ದೃಢೀಕರಣದ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ, ಸ್ವಯಂ ಘೋಷಣಾ ಪತ್ರ, ಉದ್ಯೋಗ ಪ್ರಮಾಣ ಪತ್ರ ಹಾಗೂ ತಮ್ಮ ಫೋಟೋ ಅಪ್‌ಲೋಡ್ ಮಾಡಬೇಕು ಎಂದು ಪ್ರಕಟನೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News