×
Ad

ಬೇರ್‌ಪುಟ್ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಆಹ್ವಾನ

Update: 2020-06-15 21:42 IST

ಉಡುಪಿ, ಜೂ.15: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಇಂಜನಿಯರ್‌ಗಳಿಗೆ ಸಹಾಯಕ ರಾಗಿ ಬೇರ್ ಪುಟ್ ಟೆಕ್ನಿಷಿಯನ್ 4 ಹುದ್ದೆಗಳನ್ನು 12000ರೂ. ಗೌರವಧನ ದಲ್ಲಿ ಸ್ಕ್ರೀನಿಂಗ್ ಟೆಸ್ಟ್ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಆರ್ಹ ಅ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿದ್ದು ಸಕ್ರಿಯ ಕೆಲಸಗಾರರಾಗಿರಬೇಕು. 45 ವರ್ಷಕ್ಕಿಂತ ಕಡಿಮೆ ವಯೋಮಿತಿ ಹೊಂದಿರಬೇಕು. ಸ್ಥಳೀಯ ಅ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820- 2574945ನ್ನು ಸಂಪರ್ಕಿಸುವಂತೆ ಉಡುಪಿ ಜಿಪಂ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News