×
Ad

ಜುಲೈ 2ರಂದು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ: ಸಿದ್ದರಾಮಯ್ಯ

Update: 2020-06-15 22:25 IST

ದಾವಣಗೆರೆ, ಜೂ.15: ಜು.2 ರಂದು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.  

ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರ ತಾಂಡಾದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ನೂತನ ಅಧ್ಯಕ್ಷರ ಹೋಮ ನಡೆಸಿದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ವೈಯಕ್ತಿವಾಗಿ ನನಗೆ ಹೋಮ ಹವನದ ಬಗ್ಗೆ ಆಸಕ್ತಿ ಇಲ್ಲ, ಅವರಿಗೆ ಇಷ್ಟ ಅವರು ಮಾಡಿಕೊಂಡಿದ್ದಾರೆ. ನಾನು ಬೇರೆ ಕೆಲಸದ ನಿಮಿತ್ತ ಅಲ್ಲಿ ಹೋಗಿಲ್ಲ. ವಿಧಾನ ಪರಿಷತ್ ಸದಸ್ಯರ ಆಯ್ಕೆಯ ವೇಳೆ ಸಾಮಾನ್ಯ ಕಾರ್ಯಕರ್ತರಿಗೆ ಅದ್ಯತೆ ನೀಡಲು ಚಿಂತನೆ ನಡೆದಿದೆ ಎಂದು ಹೇಳಿದರು.

ಈಗಾಗಲೇ ಬಿಜೆಪಿಯಲ್ಲಿ ಮೂರು ಗುಂಪುಗಳಾಗಿವೆ. ಈಗ ಮತ್ತೆ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಶಾಸಕರನ್ನ ಕರೆದುಕೊಂಡು ಹೋಗುವುದಾಗಿ ಹೇಳಿದ್ದಾರೆ. ಆ ಪಕ್ಷದಲ್ಲಿ ಈಗಲೇ ಮೂರು ಗುಂಪುಗಳಿವೆ. ಇನ್ನೊಂದು ಗುಂಪು ಮಾಡುವ ಪ್ರಯತ್ನ ಇರಬಹುದು ಎಂದು ಸಿದ್ದರಾಮಯ್ಯ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News