ಮುಖ್ಯಮಂತ್ರಿಯನ್ನು ಭೇಟಿಯಾದ ಮಾಜಿ ಸಚಿವ ರೋಷನ್ ಬೇಗ್

Update: 2020-06-15 18:00 GMT

ಬೆಂಗಳೂರು, ಜೂ.15: ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಸಚಿವ ರೋಷನ್ ಬೇಗ್ ಭೇಟಿ ಮಾಡಿರುವುದಾಗಿ ವರದಿಯಾಗಿದೆ.

ಸೋಮವಾರ ಇಲ್ಲಿನ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ವಿಧಾನ ಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ತಮ್ಮ ಹೆಸರನ್ನು ಪರಿಗಣಿಸುವಂತೆ ರೋಷನ್ ಬೇಗ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದರು ಎಂದು ಹೇಳಲಾಗುತ್ತಿದೆ.

ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ ಸಂದರ್ಭದಲ್ಲಿ ರೋಷನ್ ಬೇಗ್ ಅವರೂ ಸಹ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಉಪಚುನಾವಣೆಯಲ್ಲಿ ಅವರಿಗೆ ಬಿಜೆಪಿಯ ಟಿಕೆಟ್ ಸಿಕ್ಕಿರಲಿಲ್ಲ. ಹಾಗಾಗಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಈಗ ತಮಗೆ ವಿಧಾನ ಪರಿಷತ್ ಸದಸ್ಯರನ್ನಾಗಿಸುವಂತೆ ಅವರು ಮುಖ್ಯಮಂತ್ರಿಯವರಲ್ಲಿ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News