ಮಂಗಳೂರಿನಲ್ಲಿ ಸಿಪಿಎಂ‌ ಧರಣಿ

Update: 2020-06-16 06:03 GMT

ಮಂಗಳೂರು, ಜೂ.16: ಕೋವಿಡ್ -19 ನಿಗ್ರಹದಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಪಿಎಂ ಮಂಗಳವಾರ ಬೆಳಗ್ಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂದೆ ಧರಣಿ ನಡೆಸಿತು.

ಆಹಾರ ಧಾನ್ಯಗಳ ವಿತರಣೆ, ನೇರ ನಗದು ವರ್ಗಾವಣೆ, ಕಾರ್ಮಿಕರಿಗೆ ವೇತನ, ಕೆಲಸದ ಭದ್ರತೆ, ಉದ್ಯೋಗ ಖಾತ್ರಿ ಯೋಜನೆ ವಿಸ್ತರಣೆ, ಸಾರ್ವಜನಿಕ ಉದ್ದಿಮೆಗಳ ರಕ್ಷಣೆ ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಎಂ ಕಾರ್ಯಕರ್ತರು ಧರಣಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿಯ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್ ಮತ್ತು ಜೆ. ಬಾಲಕೃಷ್ಣ ಶೆಟ್ಟಿ ಹಾಗೂ ಮುಖಂಡರಾದ ದಯಾನಂದ ಶೆಟ್ಟಿ, ಸಂತೋಷ್ ಬಜಾಲ್, ಜಯಂತಿ ಬಿ. ಶೆಟ್ಟಿ, ಭಾರತಿ ಬೋಳಾರ, ಸುರೇಶ್ ಬಜಾಲ್, ಬಾಬು ದೇವಾಡಿಗ, ನವೀನ್ ಕೊಂಚಾಡಿ ಮುಂತಾದವರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News