×
Ad

Breaking News: ಚೀನಾ ಜೊತೆ ಘರ್ಷಣೆಯಲ್ಲಿ 20ಕ್ಕೂ ಹೆಚ್ಚು ಭಾರತೀಯ ಯೋಧರು ಹುತಾತ್ಮ: ವರದಿ

Update: 2020-06-16 22:06 IST

ಹೊಸದಿಲ್ಲಿ: ಲಡಾಖ್ ನ ಗಲ್ವಾನ್ ನಲ್ಲಿ ಚೀನಾ ಸೈನಿಕರ ಜೊತೆ ನಡೆದ ಘರ್ಷಣೆಯಲ್ಲಿ ಒಬ್ಬರು ಅಧಿಕಾರಿ ಸೇರಿದಂತೆ ಭಾರತದ 20 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ndtv.com ವರದಿ ಮಾಡಿದೆ.

ಚೀನಾದ ಸೈನಿಕರು ಮೃತಪಟ್ಟಿದ್ದಾರೆ ಎಂದು ಭಾರತೀಯ ಸೇನೆ ಹೇಳಿದೆ. ಚೀನಾದ 43 ಸೈನಿಕರು ಸಂಘರ್ಷದಲ್ಲಿ ಸಾವನ್ನಪ್ಪಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ.

ಪೂರ್ವ ಲಡಾಖ್‌ ನ ಗಲ್ವಾನ್ ಕಣಿವೆಯ ವಾಸ್ತವಿಕ ನಿಯಂತ್ರಣ ರೇಖೆ ಬಳಿ ಬಿಕ್ಕಟ್ಟು ಸೃಷ್ಟಿಯಾಗಿರುವ ಸ್ಥಳದಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಘರ್ಷಣೆಗಳಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತು ಎತ್ತರದ ಪ್ರದೇಶದಲ್ಲಿ ಶೂನ್ಯಕ್ಕಿಂತ ಕಡಿಮೆ ತಾಪಮಾನಕ್ಕೆ ಒಡ್ಡಿಕೊಂಡಿದ್ದ ಭಾರತೀಯ ಯೋಧರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 20ಕ್ಕೇರಿದೆ. ದೇಶದ ಪ್ರಾದೇಶಿಕ ಅಖಂಡತೆಯನ್ನು ಮತ್ತು ಸಾರ್ವಭೌಮತೆಯನ್ನು ರಕ್ಷಿಸಲು ಭಾರತೀಯ ಸೇನೆಯು ಬದ್ಧವಾಗಿದೆ.

-ಭಾರತೀಯ ಸೇನೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News