×
Ad

ಪಿಯುಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

Update: 2020-06-16 22:35 IST

ಮಂಗಳೂರು, ಜೂ.16: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಇಂಗ್ಲಿಷ್ ಭಾಷಾ ಪರೀಕ್ಷೆಯು ಜೂ.18ರಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಹೊರಡಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸೂಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜೂ.18ರಂದು ಎಲ್ಲ 51 ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ/ ಇನ್ನಿತರ ರೀತಿಯಲ್ಲಿ ಉತ್ತರ ಬರೆದು ಹಂಚುವುದು/ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿ ಸಲಾಗಿದೆ. ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ.

ಈ ಆದೇಶವು ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರಕಾರದಿಂದ/ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ- ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News