ಬಿಬಿಎಂಪಿ ಆಯುಕ್ತ, ಮುಖ್ಯ ಇಂಜಿನಿಯರ್ ವಿರುದ್ಧ ಎಸಿಬಿಗೆ ದೂರು
Update: 2020-06-17 00:06 IST
ಬೆಂಗಳೂರು, ಜೂ.16: ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಮತ್ತು ಮುಖ್ಯ ಇಂಜಿನಿಯರ್ ಬಿ.ಎಸ್.ಪ್ರಹ್ಲಾದ್ ವಿರುದ್ಧ ಎಸಿಬಿ ಕಚೇರಿಯಲ್ಲಿ ದೂರು ದಾಖಲಾಗಿದೆ.
ಭ್ರಷ್ಟ ಅಧಿಕಾರಿಯನ್ನು ಚೀಫ್ ಇಂಜಿನಿಯರ್ ಹುದ್ದೆಗೆ ನೇಮಿಸಿರುವ ಆರೋಪದ ಮೇಲೆ ಸಾಮಾಜಿಕ ಹೋರಾಟಗಾರ ಗಣೇಶ್ ಸಿಂಗ್ ಅವರು ಬಿಬಿಎಂಪಿ ಆಯುಕ್ತ ಬಿ.ಎಚ್ ಅನಿಲ್ ಕುಮಾರ್ ಮತ್ತು ಮುಖ್ಯ ಇಂಜಿನಿಯರ್ ಬಿ.ಎಸ್ ಪ್ರಹ್ಲಾದ್ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಿಸಿದ್ದಾರೆ.
ಬಿ.ಎಸ್.ಪ್ರಹ್ಲಾದ್, ಲೋಕಾಯುಕ್ತ ಸೇರಿದಂತೆ ಹಲವು ಸರಕಾರಿ ತನಿಖಾ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ಹಗರಣದ ವಿಚಾರಣೆ ಎದುರಿಸುತ್ತಿದ್ದಾರೆ. ಇಂತಹ ಭ್ರಷ್ಟ ಅಧಿಕಾರಿಯನ್ನು ಆಯುಕ್ತರು ಮುಖ್ಯ ಇಂಜಿನಿಯರ್ ಹುದ್ದೆಗೆ ನೇಮಿಸಿದ್ದಾರೆ. ಅಲ್ಲದೇ ಅನಿಲ್ ಕುಮಾರ್ ಮತ್ತು ಪ್ರಹ್ಲಾದ್ ನಡುವೆ ಕಾನೂನು ಬಾಹಿರವಾಗಿ ಕೋಟ್ಯಂತರ ರೂ. ಕೊಡು-ಕೊಳ್ಳುವಿಕೆ ನಡೆದಿದೆ ಎಂದು ಸಾಮಾಜಿಕ ಹೋರಾಟಗಾರ ಗಣೇಶ್ ಸಿಂಗ್ ಆರೋಪಿಸಿದ್ದಾರೆ.