ಸಲ್ಮಾನ್ ಖಾನ್, ಕರಣ್ ಜೋಹರ್ ಸೇರಿ 8 ಮಂದಿ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ ವಕೀಲ

Update: 2020-06-17 10:15 GMT

ಹೊಸದಿಲ್ಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಕೀಲರೊಬ್ಬರು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮತ್ತು ನಿರ್ದೇಶಕ ಕರಣ್ ಜೋಹರ್ ಸೇರಿ 8 ಮಂದಿಯ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.

ಸ್ಥಳೀಯ ಕೋರ್ಟ್ ಒಂದರಲ್ಲಿ ಈ ದೂರನ್ನು ದಾಖಲಿಸಲಾಗಿದ್ದು, ಜುಲೈ 3ರಂದು ಪ್ರಕರಣವನ್ನು ಆಲಿಸಲಾಗುವುದು ಎಂದು ಕೋರ್ಟ್ ತಿಳಿಸಿದೆ.

ಸುಶಾಂತ್ ಸಿಂಗ್ ಆತ್ಮಹತ್ಯೆಗೆ 8 ಮಂದಿ ಕಾರಣವಾಗಿದ್ದು, ಇದು ಕೊಲೆ ಎಂದು ಪರಿಗಣಿಸಬೇಕು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಆದಿತ್ಯ ಚೋಪ್ರಾ, ಸಾಜಿದ್ ನಾದಿಯಡ್ವಾಲ, ಸಂಜಯ್ ಲೀಲಾ ಭನ್ಸಾಲಿ, ಭೂಷಣ್ ಕುಮಾರ್, ಏಕ್ತಾ ಕಪೂರ್ ಮತ್ತು ನಿರ್ದೇಶಕ ದಿನೇಶ್ ವಿರುದ್ಧವೂ ದೂರು ನೀಡಲಾಗಿದೆ. ಇವರೆಲ್ಲರೂ ಸುಶಾಂತ್ ಸಿನೆಮಾ ಬಿಡುಗಡೆಯಾಗಲು ಅವಕಾಶ ನೀಡಿರಲಿಲ್ಲ ಎಂದು ಆರೋಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News