×
Ad

ಆಳುವವರ ಮೌನ ದೇಶದ್ರೋಹ: ಸಿದ್ದರಾಮಯ್ಯ

Update: 2020-06-17 17:32 IST

ಬೆಂಗಳೂರು, ಜೂ.17: ಚೀನಾ ದೇಶ ಗಡಿತಂಟೆ ಶುರುಹಚ್ಚಿ, ಏಳು ವಾರಗಳಾಗುತ್ತಾ ಬಂತು. ಅಲ್ಲಿನ ಬೆಳವಣಿಗೆಗಳ ಬಗ್ಗೆ ನರೇಂದ್ರ ಮೋದಿ, ರಾಜನಾಥ್‍ಸಿಂಗ್ ಇಲ್ಲಿಯವರೆಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ದೇಶಕ್ಕಾಗಿ ಬೆವರು, ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ, ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು. ಹುತಾತ್ಮರ ಕುಟುಂಬಕ್ಕೆ ಗೌರವದ ಶ್ರದ್ಧಾಂಜಲಿ ಸಲ್ಲಿಸೋಣ. ಚೀನಾದ ದುಷ್ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ ಎಂದು ಅವರು ಕರೆ ನೀಡಿದ್ದಾರೆ.

ಶತ್ರು ದೇಶದ ವಿರುದ್ಧ ಹೋರಾಡುವುದು ಸರಕಾರ ಅಲ್ಲ, ದೇಶ. ಸರಕಾರ ದೇಶಕ್ಕೆ, ದೇಶದ ಜನತೆಗೆ ಉತ್ತರದಾಯಿ. ದೇಶದ ಪ್ರತಿಯೊಬ್ಬ ಪ್ರಜೆಯೂ ಕೇಂದ್ರ ಸರಕಾರವನ್ನು ನಂಬಿದೆ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಂಬಿಕೆಯನ್ನು ಉಳಿಸಿಕೊಳ್ಳುವ ಹೊಣೆಯೂ ಕೇಂದ್ರ ಸರಕಾರದ್ದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News