×
Ad

Breaking News: ದಿಲ್ಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ರಿಗೆ ಕೊರೋನ ಸೋಂಕು

Update: 2020-06-17 20:02 IST

ಹೊಸದಿಲ್ಲಿ: ದಿಲ್ಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ.  

ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಅವರ ಕೊರೋನ ಫಲಿತಾಂಶ ನೆಗೆಟಿವ್ ಬಂದಿತ್ತು. ಆದರೆ ಜ್ವರ ತೀವ್ರಗೊಂಡ ನಂತರ ಮತ್ತೊಮ್ಮೆ ತಪಾಸಣೆ ನಡೆಸಿದಾಗ ಕೊರೋನ ಇರುವುದು ದೃಢಪಟ್ಟಿದೆ.

ಜ್ವರ ಮತ್ತು ಆಮ್ಲಜನಕದ ಮಟ್ಟ ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ರಾತ್ರಿ ರಾಜೀವ ಗಾಂಧಿ ಸುಪರ್ ಸ್ಪೆಷಾಲಿಟಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರವಿವಾರ ದಿಲ್ಲಿಯ ಲೆ.ಗ.ಅನಿಲ್ ಬೈಜಾಲ್ ಮತ್ತು ಗೃಹಸಚಿವ ಅಮಿತ್ ಶಾ ಅವರೊಂದಿಗೆ ಸಭೆಯಲ್ಲಿ ಭಾಗವಹಿಸಿದ್ದ ಜೈನ್ ತಾನು ಜ್ವರದಿಂದ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಮಂಗಳವಾರ ಟ್ವೀಟಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News