ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದೇವೆ: ಅಮೆರಿಕ

Update: 2020-06-17 16:11 GMT

ವಾಶಿಂಗ್ಟನ್, ಜೂ. 17: ಪೂರ್ವ ಲಡಾಖ್‌ನಲ್ಲಿ ಭಾರತ ಮತ್ತು ಚೀನೀ ಸೈನಿಕರ ನಡುವೆ ಸಂಭವಿಸಿರುವ ಭೀಕರ ಕಾಳಗದ ಬಳಿಕ ಉದ್ಭವಿಸಿರುವ ಪರಿಸ್ಥಿತಿಯನ್ನು ಅಮೆರಿಕವು ‘ನಿಕಟವಾಗಿ ಗಮನಿಸುತ್ತಿದೆ’ ಹಾಗೂ ವಿವಾದಗಳನ್ನು ಶಾಂತಿಯುತವಾಗಿ ಪರಿಹರಿಸಲಾಗುವುದು ಎಂದು ಆಶಿಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

‘‘ಭಾರತ ಮತ್ತು ಚೀನಾಗಳ ನಡುವಿನ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ ನೆಲೆಸಿರುವ ಪರಿಸ್ಥಿತಿಯನ್ನು ನಾವು ನಿಕಟವಾಗಿ ಗಮನಿಸುತ್ತಿದ್ದೇವೆ’’ ಎಂದು ವಿದೇಶಾಂಗ ಇಲಾಖೆಯ ವಕ್ತಾರರು ಸೋಮವಾರ ತಿಳಿಸಿದರು.

‘‘20 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ ಎಂಬ ಭಾರತೀಯ ಸೇನೆಯ ಹೇಳಿಕೆಯನ್ನು ನಾವು ಗಮನಿಸಿದ್ದೇವೆ. ಮೃತ ಸೈನಿಕರ ಕುಟುಂಬಗಳಿಗೆ ನಾವು ಸಂತಾಪ ವ್ಯಕ್ತಪಡಿಸುತ್ತೇವೆ’’ ಎಂದು ಅವರು ನುಡಿದರು.

ಪರಿಸ್ಥಿತಿಯನ್ನು ತಿಳಿಗೊಳಿಸುವ ತಮ್ಮ ಇಚ್ಛೆಯನ್ನು ಎರಡೂ ದೇಶಗಳು ವ್ಯಕ್ತಪಡಿಸಿವೆ. ಪ್ರಸಕ್ತ ಪರಿಸ್ಥಿತಿಗೆ ಶಾಂತಿಯುತ ಪರಿಹಾರ ಕಂಡುಹಿಡಿಯುವುದನ್ನು ಅಮೆರಿಕ ಬೆಂಬಲಿಸುವುದು ಎಂದು ವಕ್ತಾರರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News