ಬೆಂಗಳೂರು: ಇಮ್ರಾನ್ ಪಾಷಾ ಬೆಂಬಲಿಗರಿಗೆ ಜಾಮೀನು ನಿರಾಕರಣೆ
Update: 2020-06-17 22:11 IST
ಬೆಂಗಳೂರು, ಜೂ.17: ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಬಿಬಿಎಂಪಿ ಜೆಡಿಎಸ್ ಸದಸ್ಯ ಇಮ್ರಾನ್ ಪಾಷಾ ಬೆಂಬಲಿಗರಿಗೆ ನಿರೀಕ್ಷಣಾ ಜಾಮೀನಿಗೆ ನ್ಯಾಯಾಲಯ ನಿರಾಕರಣೆ ಮಾಡಿದೆ ಎಂದು ವರದಿಯಾಗಿದೆ.
ನಿರೀಕ್ಷಣಾ ಜಾಮೀನು ಕೋರಿ ಆಖೀಬ್ ಪಾಷಾ ಸೇರಿದಂತೆ 6 ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನಗರದ 69ನೆ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ ಎಂದು ತಿಳಿದುಬಂದಿದೆ.
ಜಾಮೀನು ನೀಡಿದರೆ ಆರೋಪಿಗಳು ತಲೆಮರೆಸಿಕೊಳ್ಳುವ ಸಾಧ್ಯತೆಯಿದೆ. ಹಾಗೆಯೇ ಮುಂದೆಯೂ ಇದೇ ರೀತಿಯ ಕೃತ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, ಪ್ರಕರಣ ತನಿಖಾ ಹಂತದಲ್ಲಿದ್ದು, ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಬಾರದು ಎಂಬ ಸರಕಾರಿ ಅಭಿಯೋಜಕರ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ.