×
Ad

ವಿಧಾನಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Update: 2020-06-18 16:37 IST

ಬೆಂಗಳೂರು, ಜೂ.18: ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿ ಸುನೀಲ್ ವಲ್ಯಾಪುರೆ, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್ ಹಾಗೂ ಪ್ರತಾಪ್ ಸಿಂಹ ನಾಯಕ್ ಗುರುವಾರ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News