×
Ad

5 ಸಾವಿರ ರೂ. ಪರಿಹಾರಧನಕ್ಕಾಗಿ ಅಗಸರು, ಕ್ಷೌರಿಕ ವೃತ್ತಿಯವರಿಂದ ಅರ್ಜಿ ಆಹ್ವಾನ

Update: 2020-06-18 18:00 IST

ಉಡುಪಿ, ಜೂ.18: ಕೋವಿಡ್-19ರ ನಿಯಂತ್ರಣಕ್ಕಾಗಿ ಜಾರಿಗೊಳಿಸಿದ ಲಾಕ್‌ಡೌನ್‌ನಿಂದ ಆರ್ಥಿಕವಾಗಿ ಸಂಕಷ್ಟಕ್ಕೀಡಾದ ಹಲವು ವೃತ್ತಿಯವರಂತೆ ಅಗಸರು ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೂ ಒಂದು ಬಾರಿಯ ಪರಿಹಾರಧನವಾಗಿ 5,000 ರೂ.ಗಳ ನೆರವನ್ನು ರಾಜ್ಯ ಸರಕಾರ ಘೋಷಿಸಿದೆ.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ನೀಡಲಾಗುವ ಈ ಪರಿಹಾರಧನಕ್ಕಾಗಿ ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಅಹರಿರ್ಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಗಸ/ಕ್ಷೌರಿಕ ವೃತ್ತಿಯಲ್ಲಿ ತೊಡಗಿಕೊಂಡಿರುವ ಫಲಾನುಭವಿಗಳು ಆನ್‌ಲೈನ್ ಮೂಲಕ ಸೇವಾಸಿಂಧು- https://sevasindhu.Karnataka.Gov.in/- ಪೋರ್ಟ್‌ಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅವುಗಳನ್ನು ರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಅವರ ಆಧಾರ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಪರಿಹಾರವನ್ನು ವರ್ಗಾಯಿಸಲಾಗುವುದು.

ಷರತ್ತುಗಳು: ವಯೋಮಿತಿ:18ರಿಂದ 65 ವರ್ಷಗಳು. ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರಧನ ನೀಡಲಾಗುತ್ತದೆ. ಕರ್ನಾಟಕದಲ್ಲಿ ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ವಲಸೆ ಕಾರ್ಮಿಕರು ಸಹ ಇದಕ್ಕೆ ಅರ್ಹರು. ಕರ್ನಾಟಕ ರಾಜ್ಯದ ಬಿ.ಪಿ.ಎಲ್ ಕಾರ್ಡ್ ಹೊಂದಿದವರಿಗೆ ಮಾತ್ರ ಈ ಸೌಲಭ್ಯ ಲಭ್ಯವಿದೆ. ಅಲ್ಲದೇ ಫಲಾನುಭವಿ ಆಧಾರ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹೊಂದಿರುವುದು ಕಡ್ಡಾಯ.

ಪೂರಕ ದಾಖಲೆಗಳು: ಅಗಸ/ಕ್ಷೌರಿಕ ವೃತ್ತಿ ನಿರ್ವಹಿಸುತ್ತಿರುವ ಕುರಿತು ನಿಗದಿತ ನಮೂನೆಯಲ್ಲಿ ಅಧಿಕಾರಿಗಳಿಂದ ಪಡೆದ ಉದ್ಯೋಗ ದೃಢೀಕರಣ ಪತ್ರ, ನಿಗದಿತ ನಮೂನೆಯಲ್ಲಿ ಸ್ವಯಂಘೋಷಣೆ, ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್, ಜನ್ಮ ದಿನಾಂಕ ದಾಖಲೆ, ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರದೊಂದಿಗೆ ಜೂನ್ 30ರೊಳಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News