ರಾಜ್ಯದ ಮೀನುಗಾರರಿಗೆ ಎಚ್ಚರಿಕೆ
Update: 2020-06-18 21:36 IST
ಉಡುಪಿ, ಜೂ.18: ಮುಂದಿನ 24 ಗಂಟೆಗಳಲ್ಲಿ ಮಂಗಳೂರಿನಿಂದ ಕಾರವಾರದವರೆಗಿನ ಕರ್ನಾಟಕ ಕರಾವಳಿ ತೀರ ಪ್ರದೇಶದಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದ ಬಿರುಗಾಳಿ ಬೀಸಲಿದ್ದು, ಮೂರು ಜಿಲ್ಲೆಗಳ ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕೆ ತೆರಳದಂತೆ ಬೆಂಗಳೂರಿನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯೂ ಸುರಿಯಲಿದ್ದು, ಸರಾಸರಿ 65ಮಿ.ಮೀ. ಮಳೆ ಬೀಳುವ ನಿರೀಕ್ಷೆ ಇದೆ ಎಂದು ಭಾರತ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರವು ವರದಿಯಲ್ಲಿ ತಿಳಿಸಿದೆ.