×
Ad

ಬೆಂಗಳೂರು: ಪಿಯು ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೋನ ಪಾಸಿಟಿವ್

Update: 2020-06-19 18:46 IST

ಬೆಂಗಳೂರು, ಜೂ.19: ಕೊರೋನ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಕೊನೆಗೂ ನಿನ್ನೆ ನಡೆದಿದ್ದು, ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಪಿಯು ವಿದ್ಯಾರ್ಥಿನಿಯೊಬ್ಬಳಿಗೆ ಕೊರೋನ ಪಾಸಿಟಿವ್ ಬಂದಿದೆ.

ಜಯನಗರ 4 ನೇ ಬ್ಲಾಕ್‍ನಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೋನ ಪಾಸಿಟಿವ್ ಎಂದು ತಿಳಿದುಬಂದಿದ್ದು, ಸೋಂಕಿತ ವಿದ್ಯಾರ್ಥಿನಿ ಈ ಹಿಂದೆ ಸೋಂಕಿತರ ಸಂಪರ್ಕದಲ್ಲಿದ್ದರು ಎಂದು ಹೇಳಲಾಗುತ್ತಿದೆ.

ಗುರುವಾರ ನಡೆದ ಪರೀಕ್ಷೆಯಲ್ಲಿ ಈ ವಿದ್ಯಾರ್ಥಿನಿ ಅಧಿಕಾರಿಗಳ ಕಣ್ಣು ತಪ್ಪಿಸಿ ಪರೀಕ್ಷೆಗೆ ಹಾಜರಾಗಿದ್ದರು ಎನ್ನಲಾಗಿದೆ. ಕೈಗೆ ಸೀಲ್ ಹಾಕಿದ್ದರೂ, ಅದನ್ನು ಅಳಿಸಿಕೊಂಡು ಪರೀಕ್ಷೆಗೆ ಹಾಜರಾಗಿದ್ದರು ಎಂದು ಪಾಲಿಕೆಯ ಆರೋಗ್ಯಾಧಿಕಾರಿಗಳ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ವಿದ್ಯಾರ್ಥಿನಿಯ ತಂದೆಗೆ ಸೋಂಕು: ವಿದ್ಯಾರ್ಥಿನಿ ತಂದೆಗೆ ಸೋಂಕಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಹೊಂಗಸಂದ್ರದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಕಳೆದ 10 ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಕಗ್ಗಲೀಪುರದ ನಿವಾಸದಲ್ಲಿ ವಾಸ್ತವ್ಯವಿದ್ದರು. ಆದರೆ, ಅವರಿಗೆ ಸೋಂಕು ತಗಲಿರುವುದು ಶುಕ್ರವಾರ ದೃಢವಾಗಿದೆ.

ಇದೀಗ ಸೋಂಕಿತನ ಮಗಳು ನಿನ್ನೆ ಜಯನಗರದ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದಳು. ಸದ್ಯ ಆಕೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಳಾ ಅಥವಾ ಸಾಮಾನ್ಯ ಕೊಠಡಿಯಲ್ಲಿ ವಿದ್ಯಾರ್ಥಿಗಳ ಜೊತೆಗೆ ಪರೀಕ್ಷೆ ಬರೆದಿದ್ದಳಾ ಎಂಬುದು ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News