×
Ad

ನೇತ್ರಾವತಿ ಸೇತುವೆಯಿಂದ ಯುವಕ ನಾಪತ್ತೆ

Update: 2020-06-19 20:15 IST

ಮಂಗಳೂರು, ಜೂ.19: ನಗರದ ಉಳ್ಳಾಲದ ನೇತ್ರಾವತಿ ನದಿ ಸೇತುವೆ ಬಳಿಯಿಂದ ಯುವಕ ನಾಪತ್ತೆಯಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ತಲಪಾಡಿ ದೇವಿಪುರ ನಿವಾಸಿ ಸುರೇಂದ್ರ (45) ನಾಪತ್ತೆಯಾದವರು ಎಂದು ತಿಳಿದುಬಂದಿದೆ.

ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಇವರು ಶುಕ್ರವಾರ ಮಧ್ಯಾಹ್ನ ವೇಳೆ ನೇತ್ರಾವತಿ ಸೇತುವೆ ಮೇಲೆ ನಡೆದುಕೊಂಡು ಹೋಗಿ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ.

ನಾಪತ್ತೆಯಾದ ವ್ಯಕ್ತಿಗೆ ವಿಪರೀತ ಕುಡಿತದ ಚಟವಿದ್ದು, ಈತನ ಮೊಬೈಲ್ ಸೇತುವೆ ಮೇಲೆ ಸಿಕ್ಕಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಪತ್ತೆಯಾದ ವ್ಯಕ್ತಿಯ ಪತ್ನಿಯೂ ನಗರದ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಗರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ತಿಂಗಳಲ್ಲಿ 2ನೇ ಪ್ರಕರಣ: ಜೂ.10ರಂದು ಕುರ್ನಾಡು ಗ್ರಾಮ ಹೂವಿನ ಕೊಪ್ಪಳ ನಿವಾಸಿ ಯುವಕನೊಬ್ಬ ಉಳ್ಳಾಲ ಸೇತುವೆಯಲ್ಲಿ ನಾಪತ್ತೆಯಾಗಿದ್ದು, ಬಳಿಕ ಶಿವಮೊಗ್ಗದಲ್ಲಿ ಪತ್ತೆಯಾಗಿದ್ದ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News