×
Ad

ಪ್ರತ್ಯೇಕ ಪ್ರಕರಣ : ಇಬ್ಬರ ಆತ್ಮಹತ್ಯೆ

Update: 2020-06-19 22:14 IST

ಕುಂದಾಪುರ, ಜೂ.19: ಅನಾರೋಗ್ಯದಿಂದ ಬಳಲುತ್ತಿದ್ದ ಶೇಖರ ಶೆಟ್ಟಿ(79) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.19ರಂದು ಬೆಳಗ್ಗೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರ್ವ: ಮಾನಸಿಕ ಖಿನ್ನತೆಯಿಂದ ಜೂ.17ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಂಟಕಲ್ಲುವಿನ ಅಮಿತಾ (39) ಎಂಬವರು ಜೂ.19 ರಂದು ಬೆಳಗ್ಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News