ಬೆಂಗಳೂರು: ಕೊರೋನದಿಂದ ಮಗು ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ
Update: 2020-06-19 22:26 IST
ಬೆಂಗಳೂರು, ಜೂ.19: ಹೊಸದಿಲ್ಲಿಯಿಂದ ರೈಲ್ವೆ ಮೂಲಕ ನಾಲ್ಕು ವರ್ಷದ ಮಗುವನ್ನು ಕರೆದುಕೊಂಡು ಬಂದಿದ್ದ ಪೋಷಕರ ಪೈಕಿ ಮಗುವಿಗೆ ಕೊರೋನ ಸೋಂಕು ದೃಢಪಟ್ಟಿತ್ತು. ಆದರೆ, ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಹಿನ್ನೆಲೆಯಲ್ಲಿ ಮಗು ಗುಣಮುಖವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಮಗುವಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ರೋಗಿ-1793 ಎಂದು ಮಗುವನ್ನ ಗುರುತಿಸಲಾಗಿತ್ತು. ಮೇ 23ರಂದು ವಿಕ್ಟೋರಿಯಾ ಆಸ್ಪತ್ರೆಗೆ ಮಗುವನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.
ಕೊರೋನ ಸೋಂಕಿನಿಂದ ಸಂಪೂರ್ಣ ಗುಣಮುಖವಾದ ಮಗು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.