ಖಾಸಗಿ ಶಾಲೆಗಳು ಬೋಧನ ಶುಲ್ಕ ಹೆಚ್ಚಳ ಮಾಡಿದರೆ ಕ್ರಮ: ಶಿಕ್ಷಣ ಇಲಾಖೆ ಎಚ್ಚರಿಕೆ

Update: 2020-06-19 17:15 GMT

ಬೆಂಗಳೂರು, ಜೂ.19: ರಾಜ್ಯದ ಎಲ್ಲ ಖಾಸಗಿ ಅನುದಾನ ರಹಿತ ಶಾಲೆಗಳು 2020-21ನೇ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ರೀತಿಯ ಬೋಧನಾ ಶುಲ್ಕ ಹೆಚ್ಚಿಸಬಾರದು. ಇದನ್ನು ಉಲ್ಲಂಘಿಸುವ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ಕರ್ನಾಟಕ ಶಿಕ್ಷಣ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದೆಂದು ಶಿಕ್ಷಣ ಇಲಾಖೆ ಸೂಚಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆ, ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಕೈಗಾರಿಕೆಗಳು ಸೇರಿದಂತೆ ಆರ್ಥಿಕ ಚಟುವಟಿಕೆಗಳನ್ನು ಬಂದ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೋಷಕರು ಆರ್ಥಿಕ ಸಂಕಷ್ಟಕ್ಕೆ ಈಡಾಗಿದ್ದಾರೆ. ಹೀಗಾಗಿ ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ಬೋಧನಾ ಶುಲ್ಕವನ್ನು ಹೆಚ್ಚಿಸಬಾರದೆಂದು ಖಾಸಗಿ ಖಾಲೆಗಳ ಪೋಷಕರು ಇಲಾಖೆಗೆ ಮನವಿ ಮಾಡಿದ್ದಾರೆ.

ಪೋಷಕರ ಮನವಿ ಮೇರೆಗೆ ಸಾರ್ವಜನಿಕರ ಆರ್ಥಿಕ ಸಂಕಷ್ಟವನ್ನು ಪರಿಗಣಿಸಿ ಕರ್ನಾಟಕ ಶಿಕ್ಷಣ ಕಾಯ್ದೆ-1983ರ ನಿಯಮದ ಅನುಸಾರ 2020-21ನೇ ಸಾಲಿನ ಶೈಕ್ಷಣಿಕ ಶುಲ್ಕವನ್ನು ಹೆಚ್ಚಿಸಬಾರದೆಂದು ರಾಜ್ಯದ ಎಲ್ಲ ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಶೇಖರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News