ಕ್ರೀಡಾ ಇಲಾಖೆಯ ಪ್ರಶಸ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Update: 2020-06-20 12:22 GMT

ಉಡುಪಿ, ಜೂ.20: 2019ನೇ ಸಾಲಿಗೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಸಾಧಾರಣ ಸಾಧನೆ ಮಾಡಿದ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳ/ಹಿರಿಯ ಕ್ರೀಡಾಪಟುಗಳ/ತರಬೇತುದಾರರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೀಡಲಾಗುವ ಏಕಲವ್ಯ ಪ್ರಶಸ್ತಿ ಮತ್ತು ಜೀವಮಾನ ಸಾಧನೆ ಪ್ರಶಸ್ತಿಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ. ಅರ್ಹ ಕ್ರೀಡಾ ಪಟುಗಳು -www.karunadu.karnataka.gov.in/dy-ನಲ್ಲಿ ನಿಗದಿತ ಅವಧಿಯೊಳಗೆ ತಮ್ಮ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸುವಂತೆ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಡಾ.ರೋಶನ್‌ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ (0820-2521324, 9480886467) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News