ಸರಕಾರಿ ನೌಕರರ ವರ್ಗಾವಣೆ ಮಾಡದಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

Update: 2020-06-20 12:51 GMT

ಬೆಂಗಳೂರು, ಜೂ.20: ಕೊರೋನ ವೈರಸ್ ಸೋಂಕು ಹಿನ್ನೆಲೆಯಲ್ಲಿ ಪ್ರಸ್ತುತ ಸಾಲಿನ ಸರಕಾರಿ ನೌಕರರ ವರ್ಗಾವಣೆ ಮಾಡದಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಲು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.

ಈ ಕುರಿತು ವಕೀಲ ಡಿ.ಜಿ.ಅಶೋಕ್‍ ಕುಮಾರ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.

ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಲಾಕ್‍ಡೌನ್, ಸೀಲ್‍ಡೌನ್, ಕ್ವಾರಂಟೈನ್ ರಾಜ್ಯದಲ್ಲಿ ಮುಂದುವರಿದಿದೆ. ಇಂಥ ವೇಳೆಯಲ್ಲಿ ಸರಕಾರಿ ನೌಕರರ ವರ್ಗಾವಣೆ ನಡೆದರೆ ನೌಕರರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗಲೇಬೇಕಾಗುತ್ತದೆ. ಇದರಿಂದ, ನೌಕರರು ಹಾಗೂ ಅವರ ಕುಟುಂಬದವರ ಆರೋಗ್ಯವನ್ನು ಸಂಕಷ್ಟಕ್ಕೆ ಸಿಲುಕಿಸುವ ಸಾಧ್ಯತೆ ಇರುತ್ತದೆ. ಹೀಗಾಗಿ, ಪ್ರಸ್ತುತ ಸಾಲಿನ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ನಡೆಸದಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News